Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಧರ್ಮವನ್ನು ಅತಿಯಾಗಿ ಆಚರಿಸದಿರು; ಜ್ಞಾನವನ್ನು ಅಧಿಕವಾಗಿ ಆರ್ಜಿಸಬೇಡ; ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16-17 ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:16
25 ತಿಳಿವುಗಳ ಹೋಲಿಕೆ  

ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.


ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.


ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು