Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:17
15 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?


ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು