Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತತ್ವವು ಬಹು ದೂರ, ಅಗಾಧವೇ ಅಗಾಧ; ಅದನ್ನು ಯಾರು ಕಂಡುಕೊಂಡಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪ್ರತಿಯೊಂದು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿಕೊಳ್ಳುವುದಕ್ಕೂ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ ಯಾರು ಕಂಡುಕೊಂಡಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:24
11 ತಿಳಿವುಗಳ ಹೋಲಿಕೆ  

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು