ಪ್ರಸಂಗಿ 7:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ತಿರುಗಿಕೊಂಡು ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ ವಿಚಾರಿಸಿ ಗ್ರಹಿಸುವದಕ್ಕೂ ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವದಕ್ಕೂ ಮನಸ್ಸಿಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು. ಅಧ್ಯಾಯವನ್ನು ನೋಡಿ |