ಪ್ರಸಂಗಿ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. ಅಧ್ಯಾಯವನ್ನು ನೋಡಿ |