Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಜ್ಞಾನಿಗಳ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೂಢರ ಹೊಗಳಿಕೆಗಿಂತ ಜ್ಞಾನಿಗಳ ಗದರಿಕೆಯೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:5
14 ತಿಳಿವುಗಳ ಹೋಲಿಕೆ  

ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.


ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.


ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.


ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು