Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೂಢರ ನಗೆಚಾಟಿಕೆ, ಮಡಕೆಯಡಿ ಉರಿವ ಮುಳ್ಳುಕಡ್ಡಿಯ ಚಟಪಟ. ಇದೂ ಸಹ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೂಢರ ನಗುವಾಟವು ಹಂಡೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆ. ಇದೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳುಕಡ್ಡಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, ಮೂಢನ ನಗುವು ಹಾಗೆಯೇ ಇರುವುದು. ಇದು ಕೂಡ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:6
10 ತಿಳಿವುಗಳ ಹೋಲಿಕೆ  

ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.


ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು