ಪ್ರಸಂಗಿ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವದನ್ನು ಕಂಡೆನು, ಅವರು [ಸುಖವಾಗಿ] ಗತಿಸಿದರು; ಧಾರ್ಮಿಕರೋ ಪರಿಶುದ್ಧಸ್ಥಾನದಿಂದ ತೊಲಗಬೇಕಾಯಿತು, ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು; ಇದೂ ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನೂ ನಾನು ನೋಡಿದ್ದೇನೆ. ಆದರೆ ಜನರು ಪರಿಶುದ್ಧ ಸ್ಥಳಕ್ಕೆ ಹೋಗಿ ಬಂದ ಆ ದುಷ್ಟರನ್ನು ಅವರಿದ್ದ ಪಟ್ಟಣದಲ್ಲಿ ಹೊಗಳುತ್ತಾರೆ. ಇದೂ ಸಹ ನಿರರ್ಥಕವಾದದ್ದು. ಅಧ್ಯಾಯವನ್ನು ನೋಡಿ |