Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:10
44 ತಿಳಿವುಗಳ ಹೋಲಿಕೆ  

ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?


ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.


ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.


ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.


ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.


ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.


ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.


ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.


ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.


ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”


ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.


ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು