ಪ್ರಸಂಗಿ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |