Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ಒಂದು ಚಿಕ್ಕ ಪಟ್ಟಣ, ಅದರಲ್ಲಿ ಕೊಂಚ ಜನರೇ ಇದ್ದರು; ಒಬ್ಬ ದೊಡ್ಡ ಅರಸು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:14
6 ತಿಳಿವುಗಳ ಹೋಲಿಕೆ  

ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.


ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.


ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು