Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:7
24 ತಿಳಿವುಗಳ ಹೋಲಿಕೆ  

ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.


ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.


ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,


ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.


ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.


ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.


ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು