ಪ್ರಸಂಗಿ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ. ಅಧ್ಯಾಯವನ್ನು ನೋಡಿ |