Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿವಿುತ್ತವೇ ಎಂದು ಅರಮನೆಯ ಪಹರೆಯವರೆಲ್ಲರಿಗೂ ವಿುಕ್ಕಾದವರೆಲ್ಲರಿಗೂ ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಏಕೆ ಸೆರೆಮನೆಯಲ್ಲಿದ್ದೇನೆಂಬುದು ಸ್ಪಷ್ಟವಾಗಿಯೇ ಇದೆ. ನಾನು ಕ್ರಿಸ್ತ ವಿಶ್ವಾಸಿಯಾಗಿರುವುದರಿಂದ ಸೆರೆಮನೆಯಲ್ಲಿದ್ದೇನೆ. ಇಲ್ಲಿಯ ಕಾವಲುಗಾರರಿಗೂ ಅರಮನೆಯ ಇತರ ಜನರೆಲ್ಲರಿಗೂ ಇದು ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶೆ ಮಟ್ಲ್ಯಾರ್, ಮಿಯಾ ಬಂಧಿಖಾನ್ಯಾತ್ ಹೊತ್ತೊ ಕ್ರಿಸ್ತಾ ಸಾಟ್ನಿ ಮನುನ್ ರಾಜಾಚ್ಯಾ ಘರಾತ್ಲ್ಯಾ ರಾಕ್ವಲ್ಯಾಕ್ನಿ ಅನಿ ಹುರಲ್ಲ್ಯಾ ಸಗ್ಳ್ಯಾ ಲೊಕಾಕ್ನಿಬಿ ಗೊತ್ತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:13
17 ತಿಳಿವುಗಳ ಹೋಲಿಕೆ  

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.


ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.


ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು