Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೇಗಾದರೇನು? ಯಾವ ರೀತಿಯಿಂದಾದರೂ ಕಪಟದಿಂದಾಗಲಿ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವದುಂಟು; ಇದಕ್ಕೆ ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ. ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶೆಬಿ ಹೊಂವ್ದಿ, ಕುಸ್ಡೆಪಾನ್ ನಾ ತರ್ ಬರೆಪಾನಾನ್ ಕ್ರಿಸ್ತಾಕ್ ಪರ್ಗಟ್ ಕರುಲಾಗಲೆ ಮಾಕಾ ಖುಶಿ ಹಾಯ್, ಅನಿ ಫಿಡೆ ಮಿಯಾ ಖುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:18
13 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.


ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.


ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.


ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.


ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು