Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮಾಗ್ನಿನಿ, ಅನಿ ಜೆಜು ಕ್ರಿಸ್ತಾಚ್ಯಾ ಆತ್ಮ್ಯಾಚ್ಯಾ ಮಜತಿ ವೈನಾ ಮಾಕಾ ಸುಟ್ಕಾ ಹೊವ್ಕ್ ಅನುಕುಲ್ ಹೊತಾ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:19
11 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು