Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶಿ ಮಟ್ಲ್ಯಾರ್, ಮಿಯಾ ಕಚ್ಚ್ಯಾ ವಿಶಯಾತ್ಬಿ ಮರ್ಯಾದ್ ಕರುನ್ ಘೆಯ್ನಸ್ತಾನಾ ಅದ್ದಿ ಹೊತ್ತ್ಯಾ ಸಾರ್ಕೆಚ್ ಅತ್ತಾಬಿ ಧೈರ್ಯಾನ್ ಹೊತ್ತ್ಯಾ ಸಾಟ್ನಿ ಝಿತ್ತೊ ರ್‍ಹಾಲ್ಯಾರ್‍ಬಿ ನಾ ತರ್ ಮರ್ಲ್ಯಾಬಿ ಮಾಜ್ಯಾ ಅಂಗಾನಿ ಕ್ರಿಸ್ತಾಕ್ ಮಹಿಮಾ ಹೊತಾ ಮನುನ್ ಮಾಕಾ ಆಶ್ಯಾ ಹಾಯ್ ಅನಿ ತಸೆಚ್ ಹೊತಾ ಮನ್ತಲೊ ಬರೊಸೊಬಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:20
41 ತಿಳಿವುಗಳ ಹೋಲಿಕೆ  

ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.


ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.


ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.


ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.


ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.


ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.


ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.


ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.


ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು