Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:27
53 ತಿಳಿವುಗಳ ಹೋಲಿಕೆ  

ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.


ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.


ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.


ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.


ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.


ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.


ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.


ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.


ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


“ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು