Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವು ಹೀಗಿರುವದು ವಿರೋಧಿಗಳ ನಾಶನಕ್ಕೂ ನಿಮ್ಮ ರಕ್ಷಣೆಗೂ ದೇವರಿಂದಾದ ಪ್ರಮಾಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖಚ್ಚ್ಯಾ ವಿಶಯಾತ್ಬಿ ತುಮ್ಚ್ಯಾ ವಿರೊದಿಕ್ನಿ ಭಿಂವ್ನಕಾಸಿ ಕಶ್ಯಾಕ್ ಮಟ್ಲ್ಯಾರ್, ತುಮಿ ಅಶೆ ರಾತಲ್ಲೆ ವಿರೊಧ್ ಕರ್ತಲ್ಯಾಕ್ನಿ ನಾಶ್ ಕರುಕ್, ಅನಿ ತುಮ್ಚ್ಯಾ ರಾಕ್ವನಿಕ್ ಎಕ್ ವಳಕ್ ಹೊವ್ನ್ ಹಾಯ್ ಮನ್ತಲೆ ದೆವಾಕ್ನಾ ಹೊಲ್ಲೆ ಹೊವ್ನ್ ಹಾಯ್ ತುಮ್ಕಾ ಜೈಯ್ ದಿತಲೊ ದೆವುಚ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:28
24 ತಿಳಿವುಗಳ ಹೋಲಿಕೆ  

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು