Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆಜು ಕ್ರಿಸ್ತಾಕ್ ಹೊತ್ತ್ಯಾ ದಯಾಳ್ ಪಾನಾ ವೈನಾ ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾ ಸಾಟ್ನಿ ಲೈ ತಳ್ಮಳ್ತಾ ಹೆಕಾ ದೆವುಚ್ ಮಾಜಿ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:8
24 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.


ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.


ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.


ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.


ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.


ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.


ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು