Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮ್ಚಿ ವಿಶ್ವಾಸಾಚಿ ಬಲಿ ದೆವಾಕ್‍ ದಿತಲ್ಯಾ ಸೆವೆತ್ ಮಾಜೆಚ್ ರಗಾತ್ ಬಲಿ ಭೆಟ್ವು‍ಲ್ಯಾರ್ಬಿ ಮಾಕಾ ಖುಶಿ, ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಮಿಯಾಬಿ ಖುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:17
21 ತಿಳಿವುಗಳ ಹೋಲಿಕೆ  

ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.


ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.


ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.


ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.


ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು