Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆತನಂತೆ ನಿಷ್ಕಪಟವಾಗಿ ನಿಮ್ಮ ಯೋಗಕ್ಷೇಮವನ್ನು ಬಯಸುವವರು ಬೇರೆ ಯಾರೂ ಇಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಚ್ಯಾ ಸಾರ್ಕೆ ತುಮ್ಚ್ಯಾ ವಿಶಯಾತ್ ಬರ್‍ಯಾ ಮನಾನ್ ಚಿಂತ್ತಲೆ ದುಸ್ರೆ ಕೊನ್ಬಿ ಮಾಜ್ಯಾ ಜಗ್ಗೊಳ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:20
16 ತಿಳಿವುಗಳ ಹೋಲಿಕೆ  

ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.


ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.


ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.


ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.


ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.


ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.


ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.


ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.


ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.


ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು