ಫಿಲಿಪ್ಪಿಯವರಿಗೆ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನನಗೆ ನೆರವಾಗಲು ನೀವು ಕಳುಹಿಸಿದ ಸಹೋದರ ಎಪಫ್ರೋದಿತನು ನಿಮ್ಮಲ್ಲಿಗೆ ಹಿಂದಿರುಗುವುದು ಅವಶ್ಯವೆಂದು ಭಾವಿಸುತ್ತೇನೆ. ಅವನು ನನ್ನೊಂದಿಗೆ ದುಡಿಯುತ್ತಾ, ಹೋರಾಡುತ್ತಾ ಬಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ ಜೊತೆಕೆಲಸದವನೂ ಸಹಭಟನೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನೆನಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಾಜೊ ಕಸ್ಟ್ ಧುರ್ ಕರುಕ್ ಸಾಟ್ನಿ ತುಮಿ ಧಾಡಲೊ ಮಾಜೊ ಭಾವ್ ವಾಂಗ್ಡಿ ಸೆವಾಕಾರಿ, ಅನಿ ವಾಂಗ್ಡಿ ಸೈನಿಕ್ ಹೊವ್ನ್ ಹೊತ್ತ್ಯಾ ಎಪಾಪ್ರೊದಿತಾಕ್ ತುಮ್ಚ್ಯಾ ಜಗ್ಗೊಳ್ ಧಾಡುಕುಚ್ ಪಾಜೆ ಮನುನ್ ಮಾಕಾ ದಿಸ್ಲೆ. ಅಧ್ಯಾಯವನ್ನು ನೋಡಿ |