Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಪಫ್ರೋದಿತನನ್ನು ನಿಮ್ಮ ಬಳಿಗೆ ಕಳುಹಿಸಲು ತವಕದಿಂದಿದ್ದೇನೆ. ಅವನನ್ನು ಕಂಡು ನಿಮಗೆ ಆನಂದವಾಗುವುದು, ನನ್ನ ದುಃಖವೂ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದದರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡಬೇಕೆಂತಲೂ ನನಗೆ ಕೂಡ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಹೆಚ್ಚಾದ ಅವಸರದಿಂದ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆ ಹೊವ್ನ್, ತುಮಿ ತೆಕಾ ಬಗುನ್ ಪರ್ತುನ್ ಅನಿ ಕುಶಿ ಹೊವ್ಚೆ, ಅನಿ ಮಾಜೆ ದುಖ್ಕ್ ಕಮ್ಮಿ ಹೊವ್ಚೆ ಮನುನ್ ಮಿಯಾ ತೆಕಾ ಲೈ ಆಶ್ಯಾನಿ ಧಾಡುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:28
10 ತಿಳಿವುಗಳ ಹೋಲಿಕೆ  

ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.


ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.


ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.


ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು