Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29-30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29-30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯಮಾಡದೆ ಕ್ರಿಸ್ತನ ಕೆಲಸದ ನಿವಿುತ್ತ ಸಾಯುವ ಹಾಗಿದ್ದನೆಂದು ನೀವು ತಿಳಿದು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತಸೆ ಹೊವ್ನ್, ತುಮಿ ತೆಕಾ ಎಕ್ ಭಾವಾ ಸಾರ್ಕೆ ಫುರಾ ಕುಶಿನ್ ಧನಿಯಾಕ್ ಮಿಳ್ವುನ್ ಘೆವಾ, ಅನಿ ತಸ್ಲ್ಯಾಕ್ನಿ ಸನ್ಮಾನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:29
21 ತಿಳಿವುಗಳ ಹೋಲಿಕೆ  

ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,


ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.


ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.


ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.


ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.


ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.


ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು