Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಪದವಿಯನ್ನು ಆತನು ಬಿಟ್ಟುಕೊಟ್ಟು ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಪ್ನಾಕ್ ಕಾಯ್ ನಸ್ಲಲೊ ಸಾರ್ಕೊ ಕರುನ್ ಘೆವ್ನ್ ಗುಲಾಮ್‍ಚೊ ರುಪ್ ಘೆವ್ನ್ ಮಾನ್ಸಾಂಚ್ಯಾ ಸಮಾ ಹೊಲೊ, ಅನಿ ಮಾನ್ಸಾಂಚ್ಯಾ ರುಪಾತ್ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:7
31 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.


ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,


ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.


ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು