Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಅಪ್ನಾಕ್ ಖಾಲ್ತಿ ಕರುನ್ ಘೆವ್ನ್ ಮರಾನ್ ಮಟ್ಲ್ಯಾರ್ ಕುರ್ಸಾ ವೈಲೆ ಮರಾನ್ ಘೆಯ್ ಪತರ್ಬಿ ಖಾಲ್ತಿ ಹೊವ್ನ್ ಚಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:8
26 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.


ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.


ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು