ಫಿಲಿಪ್ಪಿಯವರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಎವ್ಡ್ಯಾ ಪತರ್ ಮಿಯಾ ಹೆ ಸಗ್ಳ್ಯೆ ಪಡ್ದುನ್ ಘೆವ್ನ್ ಪುರಾ ಹೊಲ್ಲೊ ಮನುನ್ ಸಾಂಗಿನಾ, ಖರೆ ಮಿಯಾ ಖಲೆ ಘೆವ್ಕ್ ಸಾಟ್ನಿ ಕ್ರಿಸ್ತ್ ಜೆಜುನ್ ಮಾಕಾ ಧರುನ್ ಘೆಟ್ಲಾ ತೆಚ್ ಘೆವ್ಚೆ ಮನುನ್ ಕಟ್ಪಟ್ ಕರುಲ್ಲಾ, ಅಧ್ಯಾಯವನ್ನು ನೋಡಿ |