ಫಿಲಿಪ್ಪಿಯವರಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹ್ಯಾತುರ್ ಮಾಜೊ ಉದ್ದೆಶ್ ಕಾಯ್ ಮಟ್ಲ್ಯಾರ್, ಮಿಯಾ ಕ್ರಿಸ್ತಾಕ್ ಖಮ್ವುನ್ ಘೆವ್ನ್ ಖಾಯ್ದ್ಯಾಚೆ ಫಳ್ ಸ್ವತಾಚಿ ನಿತಿ ನ್ಹಯ್, ಕ್ರಿಸ್ತಾಚ್ಯಾ ವೈರ್ ವಿಶ್ವಾಸ್ ಥವ್ಲ್ಯಾರ್ ಗಾವ್ತಲಿ ಮಟ್ಲ್ಯಾರ್, ಕ್ರಿಸ್ತಾಚ್ಯಾ ವಿಶ್ವಾಸಾಚ್ಯಾ ಆಧಾರಾ ವೈನಾ ದೆವ್ ದಿತಲಿ ನಿತ್ ಘೆವ್ನ್ ಕ್ರಿಸ್ತಾಕ್ಡೆ ಹೊತ್ತೊ ಹೊವ್ನ್ ರ್‍ಹಾವ್ಚೆ ಮನ್ತಲೆಚ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.