Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ಅನುಗುಣವಾಗಿ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜೊ ದೆವ್ ಕ್ರಿಸ್ತ್ ಜೆಜು ವೈನಾ ಅಪ್ಲ್ಯಾ ಬಳಾಚ್ಯಾ ಸಾವ್ಕಾರ್ಕಿಕ್ ಸಮಾ ಹೊತ್ತೆ ಸಾರ್ಕೆ ತುಮ್ಚಿ ಹರ್ ಎಕ್ ತರಾಸಾಬಿ ಧುರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:19
44 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.


ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.


ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು