Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಈ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತುಜಿ ಪರವಾನ್ಗಿ ನಸ್ತಾನಾ ಮಾಕಾ ತಸೆ ಕರ್ತಲೆ ಬರೆ ದಿಸುಕ್ನಾ, ತಿಯಾ ಖುಶಿನ್ ಕರ್ತಲಿ ಮಜತ್ ಜಬರದಸ್ತಿನ್ ಕರುನ್ ಘೆವ್ಕ್ ಮಾಕಾ ನಕ್ಕೊ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:14
10 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು