Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪ್ರಿತಿಚ್ಯಾ ಭಾವಾ, ತುಜೊ ಪ್ರೆಮ್ ಮಾಕಾ ಲೈ ಕುಶಿ ಅನಿ ಉತ್ತೆಜನ್ ದಿತಾ; ತಿಯಾ ಸಗ್ಳ್ಯಾ ದೆವಾಚ್ಯಾ ಲೊಕಾಂಚಿ ಮನಾ ತಾಜಿ ಹೊಯ್ ಸಾರ್ಕೆ ಕರ್‍ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:7
11 ತಿಳಿವುಗಳ ಹೋಲಿಕೆ  

ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?


ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.


ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.


ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.


ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು