Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:19
15 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.


“‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,


ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.


ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು