ಮತ್ತಾಯ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅಶೆ ತೊ ಯವಜ್ತಾನಾ, ತೆಚ್ಯಾ ಸಪ್ನಾತ್ ದೆವಾಚೊ ಎಕ್ ದುತ್ ದಿಸ್ಲೊ ಅನಿ, “ದಾವಿದಾಚ್ಯಾ ಘರಾನ್ಯಾಚ್ಯಾ ಜುಜೆ ಮರಿಕ್ ತುಜಿ ಬಾಯ್ಕೊ ಕರುನ್ ಘೆವ್ಕ್ ಭಿಂವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ತಿ ಪವಿತ್ರ್ ಆತ್ಮ್ಯಾನಿ ಗರ್‍ವಾರ್ ಹೊಲಾ. ಅಧ್ಯಾಯವನ್ನು ನೋಡಿ |