Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಪ್ರವಾದ್ಯಾಚ್ಯಾ ತೊಂಡಾತ್ನಾ ಸರ್ವೆಸ್ವರಾನ್ ಸಾಂಗಲ್ಲೆ ಸಗ್ಳೆ ಖರೆ ಹೊವ್‍ಸಾಟ್ನಿ ಮನುನ್ ಹೆ ಸಗ್ಳೆ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:22
22 ತಿಳಿವುಗಳ ಹೋಲಿಕೆ  

ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.


“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.


ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.


ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.


ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,


ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.


ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.


“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು