Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಮರಿ ಪೊರಾಕ್ ಜಲಮ್ ದಿ ಪತರ್ ಜುಜೆನ್ ತಿಚೆಕ್ಡೆ ಸಮಂದ್ ಕರುಕ್ ನಾ, ಅನಿ ಜುಜೆನ್ ತ್ಯಾ ಪೊರಾಕ್ ಜೆಜು ಮನುನ್ ನಾವ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:25
10 ತಿಳಿವುಗಳ ಹೋಲಿಕೆ  

ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.


ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.


ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.


ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು