Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಷಯನು ಅರಸನಾದ ದಾವೀದನನ್ನು ಪಡೆದನು. ದಾವೀದನು ಊರೀಯನ ಹೆಂಡತಿಯಾಗಿದ್ದವಳಲ್ಲಿ ಸೊಲೊಮೋನನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದಾವಿದ್ ರಾಜಾ ಸಾಲ್ಮಾವಾಚೊ ಬಾಬಾ ಅನಿ ಸಾಲ್ಮಾವಾಚಿ ಬಾಯ್ ಅದ್ದಿ ಉರಿಯಾ ಮನ್ತಲ್ಲ್ಯಾ ಎಕಾ ಮಾನ್ಸಾಚಿ ಬಾಯ್ಕೊ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:6
25 ತಿಳಿವುಗಳ ಹೋಲಿಕೆ  

ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.


ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.


ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.


ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,


ಆರನೆಯವನು ಓಚೆಮ್, ಏಳನೆಯವನು ದಾವೀದ್.


ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.


ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.


ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು


ಸೌಲನು ಅವನನ್ನು, “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು.


ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.


ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು