Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ವಾಟೆಕ್ ಮನುನ್ ಪಿಸ್ವಿ ಹೊಂವ್ದಿತ್, ನಾಹೊಲ್ಯಾರ್ ಜಾಸ್ತಿಚಿ ಅಂಗಿ ನಾಹೊಲ್ಯಾರ್ ಹೊನಾಯಾ ನಾಹೊಲ್ಯಾರ್ ದಾಂಡೊ ಘೆವ್‍ನಕಾಶಿ. ಕಾಮ್‍ಕಾರಾಕ್ ತೆಕಾ ಪಾಜೆ ಹೊಲ್ಲಿ ಮಜುರಿ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:10
12 ತಿಳಿವುಗಳ ಹೋಲಿಕೆ  

ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.


ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು


ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.


ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.


“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.


ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.


ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು