Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಎಕ್ ಶಾರಾಕ್ ನಾಜಾಲ್ಯಾರ್ ಗಾಂವಾತ್ ತುಮಿ ಗೆಲ್ಲ್ಯಾ ತನ್ನಾ ತುಮ್ಕಾ ಕೊನ್‍ ತರ್ ಅಪ್ನಾಚ್ಯಾ ಘರಾತ್ ಸ್ವಾಗತ್ ಕರ್‍ತಾ ಕಾಯ್ ಬಗಾ, ಅನಿ ತೆ ಗಾಂವ್ ಸೊಡುನ್ ಜಯ್ ಸಗೊಳ್ ತ್ಯಾಚ್ ಘರಾತ್ ರ್‍ಹಾವಾ”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:11
14 ತಿಳಿವುಗಳ ಹೋಲಿಕೆ  

ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.


ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.


ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.


ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು