Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮ್ಚ್ಯಾ ಹ್ಯಾ ಆಂಗಾಚೊ ಜಿವ್ ಕಾಡ್ತಲ್ಯಾಕ್ ಭಿಂವ್‍ನಕಾಶಿ, ತೆನಿ ತುಮ್ಚ್ಯಾ ಅತ್ಮ್ಯಾಕ್ ಕಾಯ್-ಬಿ ಕರುಕ್ ಹೊಯ್ನಾ. ಖರೆ ಆಂಗ್ ಅನಿ ಆತ್ಮೊ ದೊನಿಬಿ ನರ್‍ಕಾತ್ ಘಾಲ್ತಲೊ ಅದಿಕಾರ್ ಹೊತ್ತ್ಯಾ ದೆವಾಕ್ ಭಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:28
30 ತಿಳಿವುಗಳ ಹೋಲಿಕೆ  

ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.


ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.


ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”


ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು