Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೊ ಕೊನ್ ಅಪ್ನಾಚೊ ಜಿವ್ ರಾಕುನ್ ಘೆವ್ಕ್ ಬಗ್ತಾ ತೊ ಕಳ್ದುನ್ ಘೆತಾ, ಜೊ ಕೊನ್ ಮಾಜೆಸಾಟಿ ಅಪ್ನಾಚೊ ಜಿವ್ ಕಳ್ದುನ್ ಘೆತಾ ತೊ ಅಪ್ನಾಚೊ ಜಿವ್ ಹುರ್ವುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:39
8 ತಿಳಿವುಗಳ ಹೋಲಿಕೆ  

ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು