ಮತ್ತಾಯ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ. ಅಧ್ಯಾಯವನ್ನು ನೋಡಿ |