Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ತಿಯಾ ಕಫರ್‍ನವ್; ತಿಯಾ ತುಕಾಚ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ಕ್ ಬಗುಲೆ ಕಾಯ್? ತಿಯಾ ನರ್‍ಕಾತುಚ್ ಜಾನಾರ್. ಕಶ್ಯಾಕ್ ಮಟ್ಲ್ಯಾರ್, ತುಜ್ಯಾ ಭುತ್ತುರ್ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ, ಸೊದಾಮಾತ್ ಕರಲ್ಲಿ ರ್‍ಹಾಲ್ಯಾರ್, ತೆ ಶಾರ್ ಆಜ್ ಪತರ್ ತಸೆಚ್ ರ್‍ಹಾಯ್ ಹೊತ್ತೆ ಅಸಿಲ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:23
30 ತಿಳಿವುಗಳ ಹೋಲಿಕೆ  

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,


ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.


ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.


“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


“ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”


“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.


ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು