Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೌದು ತಂದೆಯೇ, ಇದು ನಿಜವಾಗಿಯೂ ನಿನ್ನ ಚಿತ್ತವಾಗಿದ್ದುದರಿಂದ ನೀನು ಹೀಗೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹೊಯ್, ಬಾಬಾ, ತುಕಾ ಕಶೆ ಪಾಜೆ ಹೊತ್ತೆ, ತಸೆ ತೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:26
14 ತಿಳಿವುಗಳ ಹೋಲಿಕೆ  

ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.


ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.


ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು