Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನನ್ನು ಸ್ವೀಕರಿಸಿಕೊಳ್ಳುವವನು ಧನ್ಯನಾಗಿದ್ದಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾಜ್ಯಾ ವಿಶಯಾತ್ ಸಂಶೆವ್ ಕರಿನಸಲ್ಲಿ ಲೊಕಾ ಕವ್ಡಿ ಸುಖಿ!” ಮನುನ್ ತೆಂಕಾ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:6
26 ತಿಳಿವುಗಳ ಹೋಲಿಕೆ  

ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”


ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.


ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.


ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.


ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು.


“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು