Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಾಯ್ ಬಗುಕ್ ಗೆಲ್ಲ್ಯಾಶಿ ತುಮಿ? ಬರೆ ಕಪ್ಡೆ ನೆಸಲ್ಲ್ಯಾ ಮಾನ್ಸಾಕ್ ಕಾಯ್? ಬರೆ-ಬರೆ ಕಪ್ಡೆ ನೆಸ್ತಲಿ ಲೊಕಾ ಅರಮನೆತ್ ರ್‍ಹಾತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:8
11 ತಿಳಿವುಗಳ ಹೋಲಿಕೆ  

ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.


ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,


ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.


ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?


ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು