Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾಕ್ನಾ ದೆವಾನ್ ಸಾಂಗಲ್ಲೆ ಖರೆ ಹೊವ್‍ಸಾಟ್ನಿ ಮನುನ್ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:17
15 ತಿಳಿವುಗಳ ಹೋಲಿಕೆ  

ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”


ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.


ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.


ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.


ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು