Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫರಿಸಾಯರು ಅದನ್ನು ಕಂಡು - ನೋಡು, ನಿನ್ನ ಶಿಷ್ಯರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ ಎಂದು ಆತನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹೆ ಫಾರಿಜೆವಾನಿ ಬಗಟ್ಲ್ಯಾನಿ, ಅನಿ ಜೆಜುಕ್, ಬಗ್, ತುಜ್ಯಾ ಶಿಸಾನಿ ಕರ್‍ತಲೆ, ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ವಿರೊದ್ ಹಾಯ್! ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:2
19 ತಿಳಿವುಗಳ ಹೋಲಿಕೆ  

ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.


“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?


ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.


ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು