Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬಾಗಲ್ಲಿ ಕರಾಡಾಚಿ ಖಾಟಿ, ತೊ ಮೊಡಿನಾ, ಝೆಮ್ತಲಿ ಚಿಮ್ನಿ, ತೊ ಇಜ್ವಿನಾ, ಸಗ್ಳ್ಯಾ ಲೊಕಾಕ್ನಿ ನ್ಯಾಯ್ ಗಾವಿ ಪತರ್ ತೊ ಹಟ್ ಧರುನ್ ಘೆವ್ನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:20
21 ತಿಳಿವುಗಳ ಹೋಲಿಕೆ  

“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.


ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.


ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.


“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?


ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು