ಮತ್ತಾಯ 12:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮರ ಒಳ್ಳೇದಂದರೆ ಅದರ ಫಲವೂ ಒಳ್ಳೇದನ್ನಿರಿ. ಮರ ಹುಳುಕು ಅಂದರೆ ಅದರ ಫಲವೂ ಹುಳುಕು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 “ಬರಿ ಫಳಾ ಗಾವುಚಿ ತರ್, ಬರೆ ಝಾಡ್ ರ್‍ಹಾವ್ಕ್ ಪಾಜೆ , ಜರ್ ಝಾಡ್ ರೊಗೆಸಿ ಹಾಯ್, ತರ್ ತುಕಾ ಬರಿ ಫಳಾ ಗಾವಿನ್ಯಾತ್. ಫಳಾಂಚ್ಯಾ ವೈನಾಚ್ ಎಕ್ ಝಾಡ್ ಕಸ್ಲೆ ಮನುನ್ ವಳ್ಕುಕ್ ಹೊತಾ,” ಅಧ್ಯಾಯವನ್ನು ನೋಡಿ |